ಪೌರಾಯುಕ್ತೆಗೆ ಧಮ್ಕಿ ಕೇಸ್: ರಾಜೀವ್ ಗೌಡಗೆ ಆಶ್ರಯ ನೀಡಿದ ಉದ್ಯಮಿ ಕೂಡ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ,ಜನವರಿ,27,2026 (www.justkannada.in):  ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಮೂಲದ ಉದ್ಯಮಿ ಮೈಕಲ್ ಎಂಬುವವರನ್ನ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ರಾಜೀವ್ ಗೌಡ ಜೊತೆಗೆ ಉದ್ಯಮಿ ಮೈಕಲ್ ಕೂಡ ಬಂಧನವಾಗಿದ್ದು ಚಿಕ್ಕಬಳ್ಳಾಪುರದ ಪೊಲೀಸ್ ವಸತಿಗೃಹದಲ್ಲಿ ಇಬ್ಬರನ್ನೂ ವಿಚಾರಣೆಗೊಳಪಡಿಸಲಾಗಿದೆ ಎನ್ನಲಾಗಿದೆ.

ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡರಿಗೆ ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದು  ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡ ತಲೆಮರಿಸಿಕೊಂಡಿದ್ದರು.

Key words: life Threat Case, Rajiv Gowda, Businessman, police custody