Monday, September 28, 2026

BDA Apartments

ಇಂದು ರಾಜ್ಯದ ವಿವಿಧೆಡೆ ಹಗುರ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ BDA JK_Adv ...
Home Front Page ಇಂದು ರಾಜ್ಯದ ವಿವಿಧೆಡೆ ಹಗುರ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಇಂದು ರಾಜ್ಯದ ವಿವಿಧೆಡೆ ಹಗುರ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಜನವರಿ 28, 2021 (www.justkannada.in): ಇಂದು ರಾಜ್ಯದ ವಿವಿಧೆಡೆ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಕರ್ನಾಟಕದ ಬಯಲು ಸೀಮೆಯ ಕೆಲವು ಜಿಲ್ಲೆಗಳಲ್ಲಿ ಇನ್ನೂ ಹಗುರ ಮಳೆಯಾಗುತ್ತಿದೆ. ಇಂದು ಕೂಡ ಅದು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.