ನಿವೃತ್ತಿ ನಿರ್ಧಾರ ಘೋಷಿಸಿದ ಲಿಯೋನೆಲ್ ಮೆಸ್ಸಿ

ಬೆಂಗಳೂರು, ಅಕ್ಟೋಬರ್ 07, 2022 (www.justkannada.in):  ಅರ್ಜೆಂಟೀನಾದ ಸೂಪರ್ ಸ್ಟಾರ್ ಪುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಪುಟ್ಬಾಲ್ ಆಟಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.

2022 ರ ಕತಾರ್ ವಿಶ್ವಕಪ್  ತಮ್ಮ ಕೊನೆಯ ವಿಶ್ವಕಪ್ ಎಂದು ಲಿಯೋನೆಲ್ ಮೆಸ್ಸಿ  ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ‘ಖಂಡಿತವಾಗಿಯೂ ಇದು ನನ್ನ ಕೊನೆಯ ವಿಶ್ವಕಪ್. ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ಎಂದು ಮೆಸ್ಸಿ ಹೇಳಿಕೊಂಡಿದ್ದಾರೆ.

ಪಂದ್ಯಾವಳಿಗಾಗಿ ನಾನು ಕಾಯುತ್ತಿದ್ದೇನೆ. ಉತ್ತಮ ಆಟವನ್ನು ಆಡೋದಕ್ಕೆ ಉತ್ಸುಕನಾಗಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ.