ಬಹುತೇಕ ಏ.8 ರಂದು ಸಂಸದೀಯ ಮಂಡಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಏಪ್ರಿಲ್,3,2023(www.justkannada.in):  ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಫೈನಲ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಭ್ಯರ್ಥಿಗಳ ಬಗ್ಗೆ ಎಲ್ಲಾ ಕ್ಷೇತ್ರಗಳಲ್ಲಿ  ಅಭಿಪ್ರಾಯ ಸಂಗ್ರಹಿಸಿದ್ದೇವೆ. ನಿನ್ನೆ ಮೊನ್ನೆ ಜಿಲ್ಲಾ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ನಾಳೆ ನಾಡಿದ್ದು ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ಮಾಡುತ್ತೇವೆ ಬಳಿಕ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಬಹುತೇಕ ಏಪ್ರಿಲ್  8 ರಂಧು ಸಂಸದೀಯ ಮಂಡಳಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿಲದೆ ಎಂದು ತಿಳಿಸಿದರು.

ನಾವು ಎಸ್. ಸಿ,  ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅಲ್ಲದೆ 9ನೇ ಶೇಡ್ಯೂಲ್ ನಲ್ಲಿ ಸೇರಿಸಲು ಶಿಫಾರಸ್ಸು ಮಾಡಿದ್ದೇವೆ.  ಈ ಮೂಲಕ ಎಸ್.ಸಿ   ಎಸ್.ಟಿ ಸಮುದಾಯ ಬೇಡಿಕೆ ಈಡೇರಿಸಿದ್ದೇವೆ.  ನಾವು ಸಾಮಾಜಿಕ ನ್ಯಾಯ ಕೊಟ್ಟಿದ್ದಕ್ಕೆ  ಕಾಂಗ್ರೆಸ್ ಟೀಕೆ ಮಾಡುತ್ತದೆ. ಕಾಂಗ್ರೆಸ್ ದಲಿತ, ಲಿಂಗಾಯತ, ಒಕ್ಕಲಿಗ ವಿರೋಧಿಯಾಗಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: list – BJP -candidates – Parliamentary Board – final- CM-Basavaraja Bommai.