Tuesday, August 11, 2026

BDA Apartments

Home Front Page ನಾನು ನೀಡಿದ ಲಿಸ್ಟ್ ​​ನದ್ದು ಮಾತ್ರ ಮಾಡಿ: ಮಾಜಿ ಶಾಸಕ  ಡಾ.ಯತೀಂದ್ರ ಸಿದ್ಧರಾಮಯ್ಯ ವಿಡಿಯೋ ವೈರಲ್

ನಾನು ನೀಡಿದ ಲಿಸ್ಟ್ ​​ನದ್ದು ಮಾತ್ರ ಮಾಡಿ: ಮಾಜಿ ಶಾಸಕ  ಡಾ.ಯತೀಂದ್ರ ಸಿದ್ಧರಾಮಯ್ಯ ವಿಡಿಯೋ ವೈರಲ್

ಮೈಸೂರು, ನವೆಂಬರ್,16,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ  ಜೆಡಿಎಸ್ ಮತ್ತು ಬಿಜೆಪಿ ನಾಯಕರು ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಬೆನ್ನಲ್ಲೇ ಇದೀಗ ಸಿಎಂ ಸಿದ್ಧರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ  ಡಾ.ಯತೀಂದ್ರ ಸಿದ್ಧರಾಮಯ್ಯ ಅವರು ಮಾತನಾಡಿರುವ  ವಿಡಿಯೋವೊಂದು ವೈರಲ್ ಆಗಿದೆ.

ಸಿಎಂ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ವೈಎಸ್​ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡಿದ್ದರು. ಈ ಬೆನ್ನಲ್ಲೆ  ಸಾರ್ವಜನಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ  ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ.

ಜನಸಂಪರ್ಕ ಸಭೆಯಲ್ಲಿ ಯತೀಂದ್ರ ಅವರು ದೂರವಾಣಿ ಕರೆ ಮಾಡಿ “ಅಪ್ಪ ಹೇಳಿ” ಅಂತ ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ  ಸಿದ್ಧರಾಮಯ್ಯ ಅವರು, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ‌ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸುತ್ತಾರೆ. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ಮಹದೇವ್​ ಯಾಕೆ ಯಾವುದು ಯಾವುದೋ ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಎಂದು  ಪ್ರಶ್ನೆ ಮಾಡಿದ್ದಾರೆ.

ಇಲ್ಲ ಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿ ಅಂತ ಹೇಳುವಂತೆ ಯತೀಂದ್ರ ಅವರು ಮಹದೇವರಿಗೆ ಸೂಚಿಸಿರುವುದು ವಿಡಿಯೋದಲ್ಲಿ ಕಾಣಬಹುದು. ಇದೀಗ ಈ ವಿಡಿಯೋ ವೈರಲ್ ಆಗಿದ್ದು ಸರ್ಕಾರದ ವಿರುದ್ದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.

Key words: list -given – me: Former MLA- Dr. Yatindra Siddaramaiah’s- video -viral