ಸಚಿವ ಸ್ಥಾನಕ್ಕಾಗಿ ಲಾಬಿ: ಮತ್ತೊಮ್ಮೆ ಬಿಎಸ್ವೈ ಭೇಟಿ ಮಾಡಿದ ಎಂಟಿಬಿ ನಾಗರಾಜ್

ಬೆಂಗಳೂರು, ಜನವರಿ 04, 2019 (www.justkannada.in): ಸಚಿವ ಸ್ಥಾನ ನೀಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಎಂಟಿಬಿ ನಾಗರಾಜ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದ ವಲಸೆ ಬಂದ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತಿರುವುದಕ್ಕೆ ಬಿಜೆಪಿಯ ಹಲವು ನಾಯಕರಲ್ಲಿ ಅಸಮಾಧಾನ ಭುಗಿಲೆದ್ದಿತ್ತು.

ಎಂಟಿಬಿ ನಾಗರಾಜ್ ಕಳೆದೊಂದು ತಿಂಗಳಲ್ಲಿ ಹಲವು ಬಾರಿ ಸಿಎಂ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಇಂದು ಮತ್ತೆ ಯಡಿಯೂರಪ್ಪನವರ ಡಾಲರ್ಸ್​ ಕಾಲೋನಿಯ ಮನೆಗೆ ಭೇಟಿ ನೀಡಿದ್ದಾರೆ.

ಚುನಾವಣೆಯಲ್ಲಿ ಸೋತಿರುವ ತಮಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ. ಇನ್ನೂ ಸಚಿವ ಸಂಪುಟ ವಿಸ್ತರಣೆಯಾಗದ ಹಿನ್ನೆಲೆ ಲಾಬಿ ಮುಂದುವರೆಸಿರುವ ಎಂಟಿಬಿ ನಾಗರಾಜ್ ತಮ್ಮನ್ನು ಸಚಿವರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ.