ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆ ನಿರ್ಧಾರ ಕೈಬಿಡಲಿ- ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ..

ಬೆಂಗಳೂರು,ಆ,18,2020(www.justkannada.in): ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.local bodies - land lease –government-former CM- HD Kumaraswamy

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೋವಿಡ್-19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ  ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ  ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು.

ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.local bodies - land lease –government-former CM- HD Kumaraswamy

ಹಾಗೆಯೇ ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ  ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ಸುಮಾರು 5000 ಕೋಟಿ ರೂಪಾಯಿಗಳ  ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದು ಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಆಗ್ರಹಿಸುತ್ತೇನೆ ಎಂದು ಟ್ವೀಟ್ಟರ್ ನಲ್ಲಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Key words: local bodies – land lease –government-former CM- HD Kumaraswamy