ಅರ್ಜುನ ಆನೆ ಅಂತ್ಯಕ್ರಿಯೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ: ಲಾಠಿಚಾರ್ಜ್.

0
3

ಹಾಸನ,ಡಿಸೆಂಬರ್,5,2023(www.justkannada.in):  ನಿನ್ನೆ ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿಯಿಂದ ಮೃತಪಟ್ಟ  ಅರ್ಜುನ ಆನೆ ಅಂತ್ಯಕ್ರಿಯೆ  ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ನಡೆಯುತ್ತಿದ್ದು ಆದರೆ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಅಂತ್ಯಕ್ರಿಯೆ ಸ್ಥಳದಲ್ಲಿ ಪ್ರತಿಭಟನೆ ತೀವ್ರ ಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಪ್ರಹಾರ ನಡೆಸಿದ್ದಾರೆ.

Key words: Locals -protest -against -Arjuna’s- elephant –funeral- Lathicharge.