ಬೆಂಗಳೂರು,ಜು,17,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗೆ ಈಗಾಗಲೇ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದರೆ ಕೊರೋನಾ ತಡೆಗೆ ಒಂದು ವಾರ ಸಾಲಲ್ಲ. 15 ದಿನಗಳ ಕಾಲ ಲಾಕ್ ಡೌನ್ ಮಾಡಿ ಎಂದು ಬಿಬಿಎಂಪಿ ಅಧಿಕಾರಿಗಳು ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಒಂದು ವಾರದಲ್ಲಿ ಕೊರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಸಾಧ್ಯವಿಲ್ಲ. ಹೀಗಾಗಿ 15 ದಿನಗಳ ಕಾಲ ಲಾಕ್ ಡೌನ್ ಮಾಡಿ. ಮತ್ತೆ ಲಾಕ್ ಡೌನ್ ವಿಸ್ತರಿಸಿದರೇ ಮಾತ್ರ ಕೊರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಸಾಧ್ಯ ಎಂದು ಬಿಬಿಎಂಪಿ ಅಧಿಕಾರಿಗಳು ಸಿಎಂಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಆದರೆ ಡಿಸಿಎಂ ಅಶ್ವಥ್ ನಾರಾಯಣ್ ಬೆಂಗಳೂರು ನಗರ ಲಾಕ್ ಡೌನ್ ವಿಸ್ತರಣೆ ಬೇಡ ಎಂದು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ನಿರ್ಧಾರ ಕೈಗೊಳ್ಳುವ ಅಧಿಕಾರಿ ಸಿಎಂ ಬಿಎಸ್ ಯಡಿಯೂರಪ್ಪಗೆ ಇದೆ.
Key words: Lock down -Bangalore City – 15 days-BBMP –officer- CM.






