ಮಾರ್ಕೆಟ್ ಏರಿಯಾದಲ್ಲಿ ಮತ್ತೆ ಲಾಕ್ ಡೌನ್ ಗೆ ನಿರ್ಧಾರ-ಸಭೆ ಬಳಿಕ ಸಚಿವ ಆರ್.ಅಶೋಕ್ ಹೇಳಿಕೆ..

ಬೆಂಗಳೂರು,ಜೂ,22,2020(www.justkannada.in): ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಾರ್ಕೆಟ್ ಏರಿಯಾದಲ್ಲಿ ಲಾಕ್ ಡೌನ್ ಮಾಡಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ನಗರದಲ್ಲಿ ಕೊರೋನಾ ನಿಯಂತ್ರಣ ಕುರಿತು ಸಿಎಂ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ನಗರದ ಚಿಕ್ಕಪೇಟೆ, ಚಾಮರಾಜಪೇಟೆ, ಕಲಾಸಿಪಾಳ್ಯ, ಕೆ.ಆರ್ ಮಾರ್ಕೆಟ್ ಏರಿಯಾಗಳನ್ನ  ಲಾಕ್ ಡೌನ್ ಮಾಡಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.lock-down-market-area-bangalore-minister-r-ashok

ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಟೆಸ್ಟ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾ ಸೋಂಕು ಪತ್ತೆಗಾಗಿ ಖಾಸಗಿ ಆಸ್ಪತ್ರೆಯಲ್ಲೂ ಕೊರೋನಾ ಪರೀಕ್ಷೆ ನಡೆಸುವಂತ ತೀರ್ಮಾನ ಕೈಗೊಳ್ಳಲಾಗಿದೆ. ಚಿಕಿತ್ಸಾ ದರದ ಬಗ್ಗೆಯೂ ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

Key words: lock down –Market- Area-bangalore-Minister -R. Ashok