ಜೂನ್ 7 ರ ಬಳಿಕ ಲಾಕ್ ಡೌನ್ ಮುಂದುವರಿಕೆ ವಿಚಾರ: ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು,ಮೇ,31,2021(www.justkannada.in): ರಾಜ್ಯದಲ್ಲಿ ಉಲ್ಬಣಗೊಂಡಿರುವ ಕೊರೋನಾ 2ನೇ ಅಲೆಯನ್ನ ತಡೆಗಟ್ಟಲು  ಜೂನ್ 7ರವರೆಗೆ ಹೇರಲಾಗಿರುವ  ಲಾಕ್ ಡೌನ್ ಅನ್ನು ಮುಂದುವರೆಸುವ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.jk

ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್  ಯಡಿಯೂರಪ್ಪ, ಜೂನ್ 4 ಮತ್ತು 5ರ ನಂತರ ಲಾಕ್ ಡೌನ್ ಮುಂದುವರಿಕೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಸದ್ಯ ಜೂನ್ 7ರವರೆಗೆ ಲಾಕ್ ಡೌನ್ ಮುಂದುವರೆಯುತ್ತದೆ. ಅಲ್ಲಿಯವರೆಗೆ ಪರಿಸ್ಥಿತಿ ಅವಲೋಕಿಸಲಾಗುವುದು ಎಂದರು.

ಲಾಕ್ ಡೌನ್ ಮುಂದುವರಿಕೆ ಬಗ್ಗೆ ತಜ್ಞರು, ಸಚಿವರ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

Key words: Lockdown –continue-issue- after -June 7th-CM BS Yeddyurappa