Sunday, August 2, 2026

BDA Apartments

Home Front Page ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ – ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ – ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಬೆಂಗಳೂರು,ಮೇ,,18,2021(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆಯನ್ನ ತಡೆಗಟ್ಟಲು ಈಗಾಗಲೇ ಜಾರಿಯಿರುವ ಲಾಕ್ ಡೌನ್ ಅನ್ನ ವಿಸ್ತರಿಸುವಂತೆ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ ಎಂದಿದ್ದಾರೆ.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇಂದು ಪ್ರಧಾನಿ ಮೋದಿ ನರೇಂದ್ರ ಮೋದಿ ಅವರು ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ್ದಾರೆ. ಜಿಲ್ಲಾಧಿಕಾರಿಗಳು ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ. ಇಂದು ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಚರ್ಚೆಯಾಗಿಲ್ಲ.

ಲಾಕ್ ಡೌನ್ ಮಾಡುವ ಹೊಣೆಯನ್ನ ರಾಜ್ಯಕ್ಕೆ ಬಿಟ್ಟಿದ್ದಾರೆ. ಹೀಗಾಗಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: Lockdown -Extension -CM –Decision- Home Minister- Basavaraja Bommai.