ಲೋಕಸಭೆ ಚುನಾವಣೆ ನಮ್ಮ ಗುರಿ: ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ- ಬಿವೈ ವಿಜಯೇಂದ್ರ.

0
3

ಶಿವಮೊಗ್ಗ,ನವೆಂಬರ್,29,2023(www.justkannada.in): ಮುಂದಿನ ಲೋಕಸಭಾ ಚುನಾವಣೆ ನಮ್ಮ ಗುರಿ. ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ  ಮೊದಲ ಬಾರಿಗೆ  ಶಿವಮೊಗ್ಗಕ್ಕೆ ಆಗಮಿಸಿದ ಬಿವೈ ರಾಘವೇಂದ್ರ ಅವರು ವಿಜಯೇಂದ್ರ ಅವರನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು.  ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ, ಮುಂಬರುವ ಲೋಕಸಭಾ ಚುನಾವಣೆ ನಮ್ಮ ಮುಂದಿರುವ ಸವಾಲು. ಮತ್ತೊಮ್ಮೆ ಮೋದಿ ಅವರ ಕೈ ಬಲಪಡಿಸಬೇಕಿದೆ.  ಅದಕ್ಕಾಗಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಹೇಳಿದ್ದಾರೆ.

ನೂತನವಾಗಿ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿಜಯೇಂದ್ರ ನವೆಂಬರ್ 15ರಂದು ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡರು.  ವಿಜಯೇಂದ್ರ  ಅವರು ಇಂದು  ಕೆ.ಎಸ್ ಈಶ್ವರಪ್ಪ ಮನೆಗೂ ಭೇಟಿ ನೀಡಿದ್ದಾರೆ. ಕೆಲಹೊತ್ತು ಮಾತುಕತೆ ನಡೆಸಿದ್ದಾರೆ.

Key words: Lok Sabha- election – our goal-BJP-State president- BY Vijayendra.