ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್: ಪ್ರಧಾನಿ ಮೋದಿ ಸ್ಪರ್ಧೆ ಎಲ್ಲಿ ಗೊತ್ತೆ..?

ನವದೆಹಲಿ,ಮಾರ್ಚ್,2,2024(www.justkannada.in): ಲೋಕಸಭೆ ಚುನಾವಣೆಗೆ ಈ ತಿಂಗಳಲ್ಲಿ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು ಈ ನಡುವೆ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಮತ್ತು ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಿ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಾರಿ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ.  ಮತ್ತೆ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿನೋದ್ ತಾವ್ಡೆ ತಿಳಿಸಿದ್ದಾರೆ.

ಇನ್ನು ಮತ್ತೆ ವಾರಣಾಸಿ ಕ್ಷೇತ್ರದಿಂದಲೇ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಖನೌ ಕ್ಷೇತ್ರದಲ್ಲಿ ಕಿರಣ್ ರಿಜಿಜು ಅರುಣಾಚಲ ಪಶ್ಚಿಮ ಕ್ಷೇತ್ರ ದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಮೊದಲ ಪಟ್ಟಿಯಲ್ಲಿ 195 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ. ಈ ಪೈಕಿ 28 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಮೊದಲ ಪಟ್ಟಿಯಲ್ಲಿ ಇಬ್ಬರು ಮಾಜಿ ಸಿಎಂಗಳಿಗೆ ಟಿಕೆಟ್ ನೀಡಲಾಗಿದೆ.  34 ಸಚಿವರಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Lok Sabha –Elections- First list – BJP candidates- released.