Monday, October 12, 2026

Dasara Wishes

Happy Dasara
Home Front Page ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಮೊದಲ ಮತ್ತು 2ನೇ ಹಂತದಲ್ಲಿ ಮತದಾನ ನಡೆಯುವ ಜಿಲ್ಲೆಗಳ ಮಾಹಿತಿ ಹೀಗಿದೆ..

ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಮೊದಲ ಮತ್ತು 2ನೇ ಹಂತದಲ್ಲಿ ಮತದಾನ ನಡೆಯುವ ಜಿಲ್ಲೆಗಳ ಮಾಹಿತಿ ಹೀಗಿದೆ..

ನವದೆಹಲಿ,ಮಾರ್ಚ್,16,2024(www.justkannada.in):  ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ   ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದರು.

ರಾಜ್ಯದಲ್ಲಿ ಏಪ್ರಿಲ್​ 26 ರಂದು ಮೊದಲ ಹಂತದಲ್ಲಿ  ಈ 14  ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.

ರಾಜ್ಯದಲ್ಲಿ ಮೇ 7 ರಂದು  ಉಳಿದ ಈ 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್​, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.

ಇನ್ನು ದೇಶಾದ್ಯಂತ 7 ಹಂತಗಳಲ್ಲಿ ಎಷ್ಟೆಷ್ಟು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಇಲ್ಲಿದೆ ನೋಡಿ ಮಾಹಿತಿ.

ಏಪ್ರಿಲ್ 19 ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ

ಏಪ್ರಿಲ್ 26ರಂದು ಎರಡನೇ ಹಂತದಲ್ಲಿ 89 ಕ್ಷೇತ್ರಗಳಿಗೆ ಮತದಾನ

ಮೇ 7ರಂದು ಮೂರನೇ ಹಂತದಲ್ಲಿ 94 ಲೋಕಸಭಾ ಕ್ಷೇತ್ರಗಳಿಗೆ ಮತದಾನ

ಮೇ 13ರಂದು ನಾಲ್ಕನೇ ಹಂತದಲ್ಲಿ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ

ಮೇ 20 ರಂದು ಐದನೇ ಹಂತದಲ್ಲಿ 49 ಲೋಕಸಭಾ ಕ್ಷೇತ್ರಗಳಿಗೆ ಮತದಾನ

ಮೇ 25ರಂದು ಆರನೇ ಹಂತದಲ್ಲಿ 56 ಲೋಕಸಭಾ ಕ್ಷೇತ್ರಗಳಿಗೆ ಮತದಾನ

ಜೂನ್ 1ರಂದು ಏಳನೇ ಹಂತದಲ್ಲಿ 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

Key words: Lok Sabha –Elections-  information – districts – first and second phase- state