ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ: ಜೂನ್ 4ರಂದು ಫಲಿತಾಂಶ ಘೋಷಣೆ.

ವದೆಹಲಿ,ಮಾರ್ಚ್,16,2024(www.justkannada.in):  ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದ್ದು, ಮತದಾನ ಏಪ್ರಿಲ್ 19 ರಿಂದ ಪ್ರಾರಂಭವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್‌ 26 ರಂದು 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನೇರವೇರಲಿದೆ. ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ನಡೆಯಲಿದೆ. ಜೂನ್‌ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Key words: Lok Sabha Elections- Polling – two phases – Karnataka