ಲೋಕಸಭೆ ಚುನಾವಣೆ: ಪತ್ನಿ ಗೀತಾ ಪರ ನಟ ಶಿವರಾಜ್ ಕುಮಾರ್ ಮತಬೇಟೆ..

ಶಿವಮೊಗ್ಗ,ಮಾರ್ಚ್,20,2024(www.justkannada.in):  ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಸ್ಪರ್ಧಿಸಿದ್ದು ಇಂದಿನಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಗೆ ನಟ ಶಿವರಾಜ್ ಕುಮಾರ್ ಸಹ ಸಾಥ್ ನೀಡಿದ್ದು ಪ್ರಚಾರಕ್ಕೆ ಧುಮುಕಿದ್ದಾರೆ. ಇಬ್ಬರೂ ಒಟ್ಟಿಗೆ ಬಿಸಿನಲ್ಲಿಯೇ ಶಿವಮೊಗ್ಗದ ಹಲವು ಬೀದಿಗಳನ್ನು ಸುತ್ತಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈ ವೇಳೆ ಅದ್ಧೂರಿಯಾಗಿ ಬೈಕ್ ರ್ಯಾಲಿ ಸಹ ನಡೆಯಿತು.

ಇನ್ನು ನಟ ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿ ಗೀತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿರೆಂದು ಶಿವಮೊಗ್ಗದ ಮತದಾರರಲ್ಲಿ ಮನವಿ ಮಾಡಿದ್ದಾರೆ. ಡಾ. ರಾಜ್ ಕುಮಾರ್ ಅವರ ಸೊಸೆ,  ನನ್ನ ಪತ್ನಿ ಹಾಗೂ ಮಾಜಿ ಸಿಎಂ ಬಂಗಾರಪ್ಪ ಅವರ ಮಗಳು. ಗೀತಾಗೆ ಸಾಕಷ್ಟು ರಾಜಕೀಯ ಅನುಭವವಿದೆ.  ನಾನು ಎಲ್ಲಾ ಗ್ರಾಮಕ್ಕೂ ಭೇಟಿ ನೀಡುತ್ತೇನೆ. ಪತ್ನಿ ಗೀತಾರನ್ನ ಒಂದು ಸಾರಿ ಸಂಸದೆಯಾಗಿ ಮಾಡಿ ಎಂದು ಶಿವರಾಜ್ ಕುಮಾರ್ ಮನವಿ ಮಾಡಿದರು.

Key words: Lok Sabha Elections: Shimoga-Actor -Shivraj Kumar – campaigning – wife –Geetha shivaraj kumar