Saturday, October 31, 2026

Dasara Wishes

ಸೆ.30ರೊಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ರೆ ವಿಧಾನಸೌಧಕ್...
Happy Dasara
Home Front Page ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ.

ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ.

ಬೆಂಗಳೂರು,ಮಾರ್ಚ್,12,2024(www.justkannada.in): ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು ಇದೀಗ ಉಳಿದ ಕ್ಷೇತ್ರಗಳಿನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕಸರತ್ತು ನಡೆಸುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಬಿ.ಎಸ್ ಯಡ...

28 ಕ್ಷೇತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಪ್ರಧಾನಿ  ಮೋದಿ, ಅಮಿತ್ ಶಾ  ಅವರು ಪಟ್ಟಿ ಫೈನಲ್ ಮಾಡುತ್ತಾರೆ.  ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಗೆ  ಟಿಕೆಟ್ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬುದು ನನಗೆ ಗೊತ್ತಿಲ್ಲ. ಪ್ರಧಾನಿ  ಮೋದಿ ಮತ್ತು ಅಮಿತ್ ಶಾ ಅವರು ತೀರ್ಮಾನ ಮಾಡುತ್ತಾರೆ ಎಂದು ಬಿಎಸ್ ವೈ ಸ್ಪಷ್ಟಪಡಿಸಿದರು.

Key words: lokasabha election-BJP-Candidates-list-Former CM-BS Yeddyurappa