ಕಾರ್ಯಕರ್ತರಿಗೆ ಪ್ರತಿಭಟನೆ ಮಾಡದಂತೆ ಮನವಿ: ಪಕ್ಷೇತರ ಸ್ಪರ್ಧೆಯ ಪ್ರಶ್ನೆಯೇ ಇಲ್ಲ ಎಂದ ಸಂಸದ ಪ್ರತಾಪ್ ಸಿಂಹ.

ಮೈಸೂರು,ಮಾರ್ಚ್,13,2024(www.justkannada.in): ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆ ಹಿನ್ನೆಲೆ ಪ್ರತಿಭಟನೆ ನಡೆಸುತ್ತಿರುವ ತನ್ನ ಬೆಂಬಲಿಗರಿಗೆ ಪ್ರತಿಭಟನೆ ಮಾಡದಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಅಭಿಮಾನಿಗಳು, ಕಾರ್ಯಕರ್ತರು ಪ್ರತಿಭಟನೆ ಮಾಡದಂತೆ ಸಾಮಾಜಿಕ ಜಾಲತಾಣದಲ್ಲಿ ಸಂಸದ ಪ್ರತಾಪ್ ಸಿಂಹ  ಮನವಿ ಮಾಡಿದ್ದಾರೆ. ನಾನು ಮೋದಿ ಇಲ್ಲದೆ ಏನು ಇಲ್ಲ. ಇಲ್ಲಿರುವ ಎರಡು ಪೋಟೋ‌ ನೋಡಿ ಅರ್ಥ ಮಾಡಿಕೊಳ್ಳಿ. ನನ್ನ ರಾಜಕೀಯ ಅಸ್ತಿತ್ವ ಮೋದಿಯವರಿಂದಲೇ. ಈ‌ ಹಿನ್ನೆಯಲ್ಲಿ ಯಾರು ಪ್ರತಿಭಟನೆ ಮಾಡಬೇಡಿ. ನಾವೆಲ್ಲಾ ಒಂದೇ ಕುಟುಂಬದವರು ಮೋದಿಗಾಗಿ ಕೆಲಸ ಮಾಡೋಣ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇನೆ. ಕೊಡದೇ ಇದ್ದರೂ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಯಡಿಯೂರಪ್ಪ ನಮ್ಮ ಪಕ್ಷಾತೀತ ನಾಯಕ. ಅವರು ಕಟ್ಟಿದ ಪಕ್ಷದಲ್ಲಿ ಸಂಸದ ಆಗಿದ್ದೇನೆ. ಈಗಲೂ ಟಿಕೆಟ್ ತಪ್ಪಿಲ್ಲ. ಪಕ್ಷೇತರವಾಗಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ.ನಾನು ಉಸಿರಿರುವ ವರೆಗೂ ಮೋದಿ ಭಕ್ತನಾಗಿಯೆ ಇರುತ್ತೇನೆ ಎಂದು ಪ್ರತಾಪ್ ಸಿಂಹ ತಿಳಿಸಿದರು.

ನಾನು ಜೀವ ಇರುವವರೆಗೂ ಮೋದಿ ಭಕ್ತ.

ನಾನು ಜೀವ ಇರುವವರೆಗೂ ಮೋದಿ ಭಕ್ತ. ಪಕ್ಷ ಬಿಟ್ಟು ಎಲ್ಲಿಗೂ ಹೋಗಲ್ಲ. ನಾನು ಸಾಯುವವರೆಗೂ ಬಿಜೆಪಿ ಕಾರ್ಯಕರ್ತ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲ್ಲ. 1960ರಲ್ಲಿ ನಮ್ಮಪ್ಪ ಜನಸಂಘದಲ್ಲಿ ಇದ್ದರು. ಬೇರೆ ರಾಜಕಾರಣಿ ರೀತಿ ಅಲ್ಲ.  ಕರ್ನಾಟಕದಲ್ಲಿ ಎಷ್ಟು ಸಂಸದರ ಪರವಾಗಿ ಹೋರಾಟ ನಡೆಯುತ್ತಿದೆ . ನನಗೆ ಟಿಕೆಟ್ ಕೊಡಬೇಕು ಅಂತ ಜನ ಕೇಳುತ್ತಿದ್ದಾರೆ.  ನನಗೆ ಅಷ್ಟು ಸಾಕು ಎಂದು ಪ್ರತಾಪ್ ಸಿಂಹ ಹೇಳಿದರು.

Key words:  lokasabha-election-ticket-MP Pratap Simha – non-party -competition.