ಬಿಬಿಎಂಪಿ ಪಶ್ಚಿಮ ವಲಯದ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 4 ಲಕ್ಷ ರೂ. ಲಂಚದ ಸಮೇತ ಸಿಕ್ಕಿಬಿದ್ದ ಅಧಿಕಾರಿ

ಬೆಂಗಳೂರು,ಸೆಪ್ಟಂಬರ್,12,2022(www.justkannada.in):  4 ಲಕ್ಷ ರೂ. ಲಂಚದ ಸಮೇತ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಮತ್ತು ಪಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬಿಬಿಎಂಪಿ ಪಶ್ಚಿಮ ವಲಯದ ಕಚೇರಿ ಮೇಲೆ ಲೋಕಾಯುಕ್ತ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.  ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು.

ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರಿನಿವಾಸ ಪಿಎ ಉಮೇಶ್  ಲೋಕಾಯುಕ್ತ ಬಲೆಗೆ ಬಿದ್ದಿದ್ದು ಇಬ್ಬರನ್ನ ಬಂಧಿಸಿ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ 4 ಲಕ್ಷ ರೂ. ಲಂಚ ಸ್ವೀಕಾರ ಮಾಡಿದ ಆರೋಪ ಕೇಳಿ ಬಂದಿದೆ. ಲೋಕಾಯುಕ್ತ ಸಂಸ್ಥೆ ಬಲವರ್ಧನೆಯಾದ ಬಳಿಕ ಮೊದಲ ದಾಳಿ ಇದಾಗಿದೆ.

Key words: Lokayukta-attack -BBMP -West Zone –office-Officer – bribe