ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ: ಇಬ್ಬರು ತನಿಖಾಧಿಕಾರಿಗಳ ಬದಲಾವಣೆ.

ಬೆಂಗಳೂರು,ಮಾರ್ಚ್,7,2023(www.justkannada.in):  ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ತನಿಖಾಧಿಕಾರಿಗಳನ್ನ ಬದಲಾವಣೆ ಮಾಡಲಾಗಿದೆ.

ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಡಿವೈ ಎಸ್ ಪಿ ಪ್ರಮೋದ್ ಕುಮಾರ್, ಇನ್ಸ್​​ಪೆಕ್ಟರ್ ಕುಮಾರಸ್ವಾಮಿಯವರನ್ನು ಬದಲಾವಣೆ ಮಾಡಲಾಗಿದೆ. ಇವರ ಬದಲಿಗೆ ಡಿವೈಎಸ್ ಪಿ ಆಂಥೋನಿ ಜಾನ್, ಇನ್ಸ್​​ಪೆಕ್ಟರ್ ಬಾಲಾಜಿ ಬಾಬು ಅವರನ್ನು ನೇಮಕ ಮಾಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿ ಬದಲಾವಣೆ ಸಾಕಷ್ಟು ಅನುಮಾನ ಮೂಡಿಸಿದೆ.

ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಈಗಾಗಲೇ ಜೈಲಿನಲ್ಲಿದ್ದಾರೆ. ಆದರೆ ಎ1 ಆರೋಪಿ ಶಾಸಕ ವಿರೂಪಾಕ್ಷಪ್ಪ ಅವರನ್ನ ಇನ್ನೂ ಬಂಧಿಸಲಾಗಿಲ್ಲ. ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Key words: Lokayukta-attack -case – MLA -Madal Virupakshappa- Change – two investigators.