ಅರಣ್ಯಾಧಿಕಾರಿ ಕಚೇರಿ ಮನೆ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ.

ಕೋಲಾರ,ಫೆಬ್ರವರಿ,10,2023(www.justkannada.in): ಬೆಳ್ಳಂಬೆಳಿಗ್ಗೆ ಕೋಲಾರದಲ್ಲಿ ಅರಣ್ಯಾಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು  ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರದಲ್ಲಿ ಡಿಸಿಎಫ್ ವೆಂಕಟೇಶ್  ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ 8 ಕಡೆ ಲೋಕಾಯುಕ್ತ ದಾಳಿಯಾಗಿದೆ. ಬೆಳ್ಳಂಬೆಳಿಗ್ಗೆ 5 ಗಂಟೆಗೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿಯಾಗಿದೆ. 8 ತಂಡಗಳಾಗಿ ದಾಳಿ ನಡೆಸಿದ್ದಾರೆ.

Key words: Lokayukta-attack-forest -officer – inspection.