Thursday, September 10, 2026

BDA Apartments

Home Front Page ಬಿಜೆಪಿ ಶಾಸಕ ಪುತ್ರನ ಮೇಲೆ ಲೋಕಾಯುಕ್ತ ದಾಳಿ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ-ಸಿಎಂ ಬೊಮ್ಮಾಯಿ.

ಬಿಜೆಪಿ ಶಾಸಕ ಪುತ್ರನ ಮೇಲೆ ಲೋಕಾಯುಕ್ತ ದಾಳಿ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ-ಸಿಎಂ ಬೊಮ್ಮಾಯಿ.

ಬೆಂಗಳೂರು,ಮಾರ್ಚ್,3,2023(www.justkannada.in): ಲೋಕಾಯುಕ್ತ ಬಲ ತುಂಬಿದ್ಧೇ ಭ್ರಷ್ಟಾಚಾರ ನಿಗ್ರಹಕ್ಕೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ, ಲೋಕಾಯುಕ್ತ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮನೆ  ಮೇಲೆ ಲೋಕಾಯುಕ್ತ ದಾಳಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ‘ಭ್ರಷ್ಟಾಚಾರ ತಡೆಯುವುದಕ್ಕಾಗಿ ಲೋಕಾಯುಕ್ತ ಸ್ಥಾಪನೆ ಮಾಡಿದ್ದೇವೆ. ಕಾಂಗ್ರೆಸ್ ಶಾಸಕರ ಮೇಲು ಹಲವು ಆರೋಪಗಳಿತ್ತು, ಅವೆಲ್ಲವೂ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಮುಚ್ಚಿ ಹಾಕಿದ್ದು, ಆ ಎಲ್ಲ ಕೇಸ್​ಗಳ ತನಿಖೆ ಆಗಲಿ ಎಂದು  ಹೇಳಿದರು.

ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರುವುದು ಭ್ರಷ್ಟಾಚಾರ ನಿಯಂತ್ರಿಸಲು. ಹಿಂದೆ ಲೋಕಾಯುಕ್ತ ಇಲ್ಲದೆ ಕಾಂಗ್ರೆಸ್ ಕಾಲದ ಕೇಸ್​ಗಳು ಮುಚ್ಚಿಹೋಗಿದ್ದವು. ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ.  ನಾವು ಯಾರನ್ನೂ ರಕ್ಷಣೆ ಮಾಡಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಹೇಳಿದರು.

 

Key words: Lokayukta – BJP MLA’s- son – CM-Basavaraja Bommai.