ಲಂಚ ಪಡೆಯುವ ವೇಳೆ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೆಎಎಸ್ ಅಧಿಕಾರಿ.

ಬೆಂಗಳೂರು,ಸೆಪ್ಟಂಬರ್,21,2022(www.justkannada.in):  ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.

ಕೆಎಎಸ್ ಅಧಿಕಾರಿ ರಘುನಾಥ್ ಭೂಸ್ವಾಧೀನಾಧಿಕಾರಿ  ವಿಜಯ್ ಬಲೆಗೆ ಬಿದ್ದ ಅಧಿಕಾರಿಗಳು. ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಜಮೀನು ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಡಿವೈಎಸ್ ಪಿ  ಪ್ರದೀಪ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಸಿಕ್ಕಿಬಿದ್ದ ಅಧಿಕಾರಿಗಳನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Key words: Lokayukta- KAS officer – accepting -bribe.