ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು,ಡಿಸೆಂಬರ್,24,2025 (www.justkannada.in):  ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್  ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಹಲಸೂರು ನಿವಾಸ ಸೇರಿ 10 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿಯಾಗಿದೆ. 50 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ  ನಡೆಸುತ್ತದ್ದಾರೆ

Key words: Lokayukta, raid, Jameer Ahmed Khan, private secretary, house