ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಕೋಟಿ ಕೋಟಿ ನಗದು ಮತ್ತು ಚಿನ್ನಾಭರಣ ಪತ್ತೆ.

ಬೆಂಗಳೂರು,ಏಪ್ರಿಲ್,24,2023(www.justkannada.in): ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸದಲ್ಲಿ ಕೋಟಿ ಕೋಟಿ ಹಣ ಮತ್ತು ಚಿನ್ನಾಭರಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ವೇಳೆ 1 ಕೋಟಿ ರೂ ನಗದು  ಮತ್ತು1 ಕೋಟಿ ಮೌಲ್ಯದ ಚಿನ್ನ ವಜ್ರ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಲ್ಲದೆ ಗಂಗಾಧರಯ್ಯ ಬರೊಬ್ಬರಿ 12 ನಿವಾಸ ಹೊಂದಿದ್ದು, ಮಲ್ಲೇಶ್ವರಂನಲ್ಲಿ 3,65 ಕೋಟಿ ಮೌಲ್ಯದ ಫ್ಲ್ಯಾಟ್ ಪತ್ತೆಯಾಗಿದೆ  ಎನ್ನಲಾಗಿದೆ. ಇಂದು ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆಗಳಲ್ಲಿ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ನಗರದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವನ್ಯಜೀವಿ ವಿಭಾಗದ ನಿವೃತ್ತ ಡಿಸಿಎಫ್​ ನಾಗರಾಜ್ ಮನೆಗಳ ಮೇಲೆ ರೇಡ್ ಆಗಿದೆ. ಶಿವಮೊಗ್ಗ ನಗರ ಸಾಗರ ರಸ್ತೆಯ ಬಳಿ ಮನೆ, ಫಾರ್ಮ್​ ಹೌಸ್​, ಶಿವಮೊಗ್ಗದ ಗುಡ್ಲಕ್​​ ಸರ್ಕಲ್​ ಬಳಿಯ ವಿಸ್ಮಯ ಕಾಂಪ್ಲೆಕ್ಸ್ ಹಾಗೂ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ವಿಜಯೇಂದ್ರ ನಾಮಪತ್ರ ಸಲ್ಲಿಕೆ ವೇಳೆ ನಾಗರಾಜ್ ಬಿಜೆಪಿ ಸೇರಿದ್ದರು.

Key words: Lokayukta- raid – BBMP officer- Gangadharaiah-residence: