Monday, October 12, 2026

Dasara Wishes

Mysore dasara DasraWishes_JK DasraWishes JK
Happy Dasara
Home Front Page ಲೋಕಾಯುಕ್ತ ದಾಳಿ : ಅಧಿಕಾರಿ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಲೋಕಾಯುಕ್ತ ದಾಳಿ : ಅಧಿಕಾರಿ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಬೆಳಗಾವಿ,ಏಪ್ರಿಲ್,11,2026 (www.justkannada.in):  ಬೆಳಗಾವಿ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದು ಈ ವೇಳೆ 14 ಕೋಟಿ .ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಅಲ್ಲದೆ 3.12 ಕೋಟಿ ರೂಪಾಯಿ ಬ್ಯಾಂಕ್ ಡೆಪಾಸಿಟ್ ಇಟ್ಟಿರುವುದು ಬೆಳಕಿಗೆ ಬಂದಿದೆ.

ಹಾಗೆಯೇ ಅಜಯ್ ಸಿಂಗ್ ರಜಪೊತ್ ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯ ವಿವಿಧೆಡೆ ಒಟ್ಟು 18 ನಿವೇಶನಗಳನ್ನುಹೊಂದಿದ್ದಾರೆ. ಎಂದು ಲೋಕಾಯುಕ್ತ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

Key words: Lokayukta, raid,  Illegal assets, worth Rs 14 crore, found