Saturday, August 8, 2026

BDA Apartments

Home Front Page ಮೈಸೂರು ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ  ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಮೈಸೂರು ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ  ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಮಂಡ್ಯ,ನವೆಂಬರ್,12,2024 (www.justkannada.in): ಮೈಸೂರು ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ  ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಮೈಸೂರು ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠಲ್ ಡವಳೇಶ್ವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಧಾರವಾಡದಲ್ಲಿ  ಕೆಐಎಡಿಬಿ ಎಇಇ ಗೋವಿಂದ ಭಜಂತ್ರಿ  ಮನೆ ಮೇಳೆ ದಾಳಿಯಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಕಮಲ ರಾಜ್ ಮನೆ ಮೇಲೂ ದಾಳಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

Key words: Lokayukta, Raid, Mandya, Darawad,