Tuesday, September 22, 2026

BDA Apartments

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ BDA JK_Adv BDA Adv
Home Front Page ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಜುಲೈ 23,2025 (www.justkannada.in):  ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವೆಡೆ  ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿದ್ದು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಂಗಳೂರು ಮೈಸೂರು, ಬಳ್ಳಾರಿ ಕೊಪ್ಪಳದ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಸದ್ಯ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಆರ್​.ಟಿ.ನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೈಸೂರಿನಲ್ಲೂ  ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ.

ಹಾಗೆಯೇ ಮೈಸೂರಿನ ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಇನ್ನು ಬಳ್ಳಾರಿಯಲ್ಲಿ  ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ.

ಕೊಪ್ಪಳ ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೆಕು ಚವ್ಹಾಣ್​ ಗೆ ಸೇರಿದ್ದ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.vtu

Key words: Lokayukta, raids, officers, Bangalore