ಕಂದಾಯ ಇಲಾಖೆಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ.

ಬೆಂಗಳೂರು, ಆಗಸ್ಟ್ 3,2023(www.justkannada.in):  ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ 45 ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರು ಜಿಲ್ಲೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಪದ್ಮನಾಭನಗರ, ಜಯನಗರ, ವಿಜಯನಗರ, ಬಸವನಗುಡಿ, ಬ್ಯಾಟರಾಯನಪುರ, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ
ಕೆ.ಆರ್.ಪುರಂ ಸೇರಿದಂತೆ ಒಟ್ಟು 45 ಆರ್‌ಒ, ಎಆರ್‌ಒ, ಎಡಿಟಿಪಿ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ, ತಪಾಸಣೆ ನಡೆಸುತ್ತಿದ್ದಾರೆ.

Key words: Lokayukta raids – 45 offices – Revenue Department- document- verification