Saturday, September 5, 2026

BDA Apartments

Home Front Page ಮೈಸೂರಿನಲ್ಲಿ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

ಮೈಸೂರಿನಲ್ಲಿ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

ಮೈಸೂರು,ನವೆಂಬರ್,25,2025 (www.justkannada.in): ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಹೂಟಗಳ್ಳಿ ನಗರಸಭೆ ಆರ್ ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.  ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಲೋಹಿತ್ ಕುಮಾರ್ ನೇತೃತ್ವದಲ್ಲಿ ದಾಳಿಯಾಗಿದೆ

ತಿ.ನರಸೀಪುರದಲ್ಲಿರುವ ರಾಮಸ್ವಾಮಿ‌ ಮನೆ, ವಿಜಯನಗರ ನಾಲ್ಕನೇ ಹಂತದಲ್ಲಿರುವ ಗಿರೀಶ್ ಅವರ ಮನೆ ಮೇಲೆ ರೇಡ್ ಮಾಡಲಾಗಿದ್ದು, ಅಧಿಕಾರಿಗಳು ಮನೆಯಲ್ಲಿರುವ ಕಡತಗಳು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Key words: Lokayukta, raids, Mysore, officers, documents