ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಜ್ಜು: ಯಾವ ಯಾವ ಕ್ಷೇತ್ರಗಳಲ್ಲಿ ವೋಟಿಂಗ್..?

ಬೆಂಗಳೂರು,ಮೇ,6,2024 (www.justkannada.in):  ರಾಜ್ಯದಲ್ಲಿ  14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆದಿದ್ದು, ಉಳಿದ 14 ಕ್ಷೇತ್ರಗಳಿಗೆ ನಾಳೆ ವೋಟಿಂಗ್ ನಡೆಯಲಿದೆ. ನಾಳೆ ಮತದಾನ ನಡೆಯಲಿರುವ 14 ಕ್ಷೇತ್ರಗಳಲ್ಲೂ ಸಕಲ ಸಿದ್ದತೆ ಪೂರ್ಣಗೊಂಡಿದ್ದು ತಮ್ಮ ಹಕ್ಕು ಚಲಾಯಿಸಿಲು ಮತದಾರರು ಸಜ್ಜಾಗಿದ್ದಾರೆ.

ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆದಿತ್ತು. ಇದೀಗ ರಾಜ್ಯದಲ್ಲಿ 2ನೇ ಹಂತದ ಮತದಾನ ನಾಳೆ ನಡೆಯಲಿದೆ.  ಶಿವಮೊಗ್ಗ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಹಾವೇರಿ, ಕೊಪ್ಪಳ, ಗುಲ್ಬರ್ಗ, ರಾಯಚೂರು ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ. ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದವರಿಗೆ 6ರ ನಂತರವೂ ಅವಕಾಶ ದೊರೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ದೇಶದಲ್ಲಿ ಜೂನ್ 1ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

Key words: LokSabha, Elections, 2nd phase, tomorrow