ನಾಳೆ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ: ಕಲಾಪ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ.

ಬೆಂಗಳೂರು,ಸೆಪ್ಟಂಬರ್,23,2021(www.justkannada.in):  ನಾಳೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು  ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ಮಾಡಲಿದ್ದಾರೆ.

ಈ ನಡುವೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ  ವಿರೋಧಿಸಿ ಕಲಾಪ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಸದನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಭಾಷಣ ಬೇಡ.  ವಿಧಾನಸೌದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೇಕಿದ್ದರೇ ಭಾಷಣ ಮಾಡಲಿ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದೆ.

ಆದರೆ ಕಾಂಗ್ರೆಸ್ ಸಲಹೆಯನ್ನ ಸರ್ಕಾರ ತಿರಸ್ಕರಿಸಿದ್ದು ಈ ಹಿನ್ನೆಲೆಯಲ್ಲಿ ನಾಳಿನ ಕಲಾಪವನ್ನ ಬಹಿಷ್ಕರಿಸಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. ಸೆಪ್ಟಂಬರ್ 13 ರಿಂದ ಆರಂಭವಾಗಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಬೆಲೆ ಏರಿಕೆ, ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

Key words: LokSabha- Speaker -Om Birla-speech – joint session – tomorrow- Congress-boycott