Monday, August 10, 2026

BDA Apartments

Home Front Page ರಾಜ್ಯದಲ್ಲಿ ಲೂಟಿ ಸರ್ಕಾರ: ರಾಜ್ಯಪಾಲರ ಕೈಯಲ್ಲಿ ಸುಳ್ಳು ಹೇಳಿಸಿದೆ- ಆರ್.ಅಶೋಕ್ ಕಿಡಿ.

ರಾಜ್ಯದಲ್ಲಿ ಲೂಟಿ ಸರ್ಕಾರ: ರಾಜ್ಯಪಾಲರ ಕೈಯಲ್ಲಿ ಸುಳ್ಳು ಹೇಳಿಸಿದೆ- ಆರ್.ಅಶೋಕ್ ಕಿಡಿ.

ಬೆಂಗಳೂರು, ಫೆಬ್ರವರಿ,12,2024(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿ ಸರ್ಕಾರ. ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.

ವಿಧಾನಮಂಡಲ ಅಧಿವೇಶನ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ. ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಸುಳ್ಳು ಮಾಹಿತಿ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಈವರೆಗೂ ಯಾವುದೇ ಅಭಿವೃದ್ಧಿ ಆಗಿಲ್ಲ. ಜನರ ಹಣವನ್ನು ಕೊಳ್ಳೆ ಹೊಡೆಯುವುದೇ ಸರ್ಕಾರದ ಕೆಲಸ ಆಗಿದೆ ಕಟುವಾಗಿ ಟೀಕಿಸಿದರು.

ಕೇಂದ್ರದ ಯೋಜನೆಯನ್ನು,  ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ನಾವೇ ತಂದಿದ್ದೀವೆ, ನಾವೇ ಮಾಡಿದ್ದು ಎಂದು ರಾಜ್ಯ ಸರ್ಕಾರ ಬೆನ್ನುತಟ್ಟಿಕೊಂಡಿದೆ. ಹಾಗೆಯೇ 5ನೇ  ಗ್ಯಾರಂಟಿ ಪ್ರಾರಂಭವೇ ಆಗಿಲ್ಲ. ಒಬ್ಬ ನಿರುದ್ಯೋಗಿ ಯುವಕನಿಗೆ ಒಂದು ರೂಪಾಯಿ ಸಿಕ್ಕಿಲ್ಲ ಎಂದು ಆರ್.ಅಶೋಕ್ ಲೇವಡಿ ಮಾಡಿದರು.

ಬರದ ವಿಚಾರದಲ್ಲಿ ಎರಡು ಸಾವಿರ ಹಣ ಕೊಟ್ಟಿಲ್ಲ. ರೈತರಿಗೆ ಮೋಸ ಮಾಡುತ್ತಾ ಇದ್ದಾರೆ. ಬರ ಪರಿಸ್ಥಿತಿ 25 ಸಾವಿರ ಪರಿಹಾರ ನೀಡಬೇಕು ಅಂತ ಒತ್ತಾಯ ಮಾಡಿದ್ದೆವು. ಅದನ್ನು ಕೊಡುವುದು ಬಿಟ್ಟು ಕೇಂದ್ರದ ಮೇಲೆ ಗೂಬೆ ಕುರಿಸುವ ಕೆಲಸ ಆಗುತ್ತಿದೆ. ಅಭಿವೃದ್ಧಿ ಕುಂಠಿತ ಆಗಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.

Key words: looting -government – state- Governor- R. Ashok