ಬೈಕ್ ಗೆ ಲಾರಿ ಡಿಕ್ಕಿ: ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವು.

ಹಾಸನ,ಜುಲೈ,8,2022(www.justkannada.in): ಬೈಕ್ ಗೆ ಲಾರಿ ಡಿಕ್ಕಿಯಾಗಿ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸೀಮಾ(38) ಹಾಗೂ ಮಯೂರ(10) ಮೃತಪಟ್ಟವರಿ. ಮಗನನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮಯೂರ ಕೇಂದ್ರೀಯ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದನು.tractor-collision-bike-bike-rider-dies-on-the-spot-mysore

ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: lorry- collided – bike-mother-son-died-hassan