ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ:  ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ.

ಬೆಂಗಳೂರು,ಜನವರಿ,17,2023(www.justkannada.in): ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬ್ಯಾಡರಹಳ್ಳಿ ಬಳಿ ಈ ಘಟನೆ ನಡೆದಿದೆ. ರವಿ ಮತ್ತು ವಿಕಾಸ್ ಮೃತಪಟ್ಟ ಯುವಕರು. ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದ್ದು ಡಿಕ್ಕಿ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: lorry -collided – bike –Two- youths- died