ಗಣಿ ಸಮಸ್ಯೆಯಿಂದ ಸರಕಾರದ ಬೊಕ್ಕಸಕ್ಕೆ ನಷ್ಟ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು, ಆಗಸ್ಟ್, 28, 2020(www.justkannada.in) : ಗಣಿ ಇಲಾಖೆಯ ಹಲವು ಸಮಸ್ಯೆಗಳು ನೆನೆಗುದಿಗೆ ಬಿದ್ದಿದ್ದು, ಇದರಿಂದ ರಾಜ್ಯ ಸರಕಾರಕ್ಕೆ ನಷ್ಟವಾಗುತ್ತಿದೆ ಎಂದು ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

jk-logo-justkannada-logo

ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಗಣಿ ಇಲಾಖೆ ಸಂಬಂಧಿಸಿದಂತೆ ಸುಮಾರು 1 ಗಂಟೆಗಳ ಕಾಲ ಸುಧೀರ್ಘ ಚರ್ಚೆ ನಡೆಸಿದ ನಂತರ ಪ್ರಹ್ಲಾದ್ ಜೋಶಿ ಮಾತನಾಡಿದರು.

ರಾಜ್ಯವನ್ನು ನಂ.1 ಕೈಗಾರಿಕೆ ಸ್ನೇಹಿಯಾಗಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನವೀಕರಣ ಬಾಕಿ ಉಳಿದಿರುವ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪ್ರಹ್ಲಾದ್ ಜೋಶಿ ಅವರು ಗಣಿ ಇಲಾಖೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದು, ಬಹಳ ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸಿದ್ದಾರೆ. ಸರಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

key words ; Loss-government-coffer-mine-problem-Prahlad Joshi