ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ-ಬೇಸರ ಹೊರ ಹಾಕಿದ ಮಾಜಿ ಸಚಿವ ಎಂಟಿಬಿ ನಾಗರಾಜ್ .

ಬೆಂಗಳೂರು,ಜೂನ್,26,2023(www.justkannada.in): ಕಳೆದ ರಾಜ್ಯ ವಿಧಾನಸಭಾ  ಚುನಾವಣೆಯಲ್ಲಿ ಸೋತ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ ಹೊರ ಹಾಕಿದ್ದಾರೆ.

ನಿನ್ನೆ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ತಮ್ಮ ಸೋಲಿನ ಬಗ್ಗೆ ಮಾತನಾಡಿದ ಮಾಜಿ ಸಚಿವ ಎಂಟಿಬಿ ನಾಗರಾಜ್,  ಕಾಂಗ್ರೆಸ್ ​ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ. ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

ಡಾ.ಕೆ.ಸುಧಾಕರ್​ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ಉಸ್ತುವಾರಿ ಸ್ಥಾನವನ್ನು ಡಾ.ಕೆ.ಸುಧಾಕರ್​ ಸಮರ್ಥವಾಗಿ ನಿಭಾಯಿಸಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಸುಧಾಕರ್ ​ನಿಂದಾಗಿಯೇ ನಾನು ಸೋತಿದ್ದು ಎಂದು ಎಂಟಿಬಿ ನಾಗರಾಜ್  ಆರೋಪಿಸಿದರು.

Key words: lost – election -defeated -Former minister -MTB Nagaraj.