ಟಿಕೆಟ್  ಕೈತಪ್ಪಿದ ಹಿನ್ನೆಲೆ: ಬಿಜೆಪಿಗೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಗುಡ್ ಬೈ.

ಚಿಕ್ಕಮಗಳೂರು,ಏಪ್ರಿಲ್,13,2023(www.justkannada.in):  ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಅಸಮಾಧಾನ ಸ್ಪೋಟಗೊಳ್ಳುತ್ತಲೇ ಇದ್ದು 2ನೇ ಪಟ್ಟಿ ಬಿಡುಗಡೆ ಬೆನ್ನಲ್ಲೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಸಹ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಎಂಪಿ ಕುಮಾರಸ್ವಾಮಿ ಮೂಡಿಗೆರೆಯಿಂದ ಕಣಕ್ಕಿಳಿಯಲು ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಬಿಜೆಪಿ ಹೈಕಮಾಂಡ್​, ದೀಪಕ್ ದೊಡ್ಡಯ್ಯ ಎನ್ನುವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಈ ಹಿನ್ನೆಲೆ ಅಸಮಧಾನಗೊಂಡ ಎಂಪಿ ಕುಮಾರಸ್ವಾಮಿ ಅವರು ಇಂದುಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ.ಪಿ.ಕುಮಾರಸ್ವಾಮಿ, ಮೂಡಿಗೆರೆ ಕ್ಷೇತ್ರದ ಟಿಕೆಟ್ ಕೈತಪ್ಪಲು ಸಿಟಿ ರವಿ ಕಾರಣ. ಅವರಿಗೆ ನಿಷ್ಠರಾಗಿ ಹೋಗಬೇಕು. ಅದು ನನ್ನಿಂದ ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ನೆಲ ಕಚ್ಚಲು  ಸಿಟಿ ರವಿ ಕಾರಣರಾಗುತ್ತಾರೆ. ದೆಹಲಿಯಲ್ಲಿ ಶಾಸಕ ಸಿಟಿ ರವಿ ಕಣ್ಣಮುಚ್ಚಾಲೆ ಆಡುತ್ತಿದ್ದಾರೆ. ಬಿಎಸ್ ವೈ ಮೊಬೈಲ್  ಸ್ವಿಚ್ ಆಫ್ ಮಾಡಿಕೊಂಡ್ರೆ 50 ಸ್ಥಾನ ಬರಲ್ಲ. ಪಕ್ಷಕ್ಕೆ ನಾನು ಏನು ಅನ್ಯಾಯ ಮಾಡಿದ್ದೇನೆ. ಜನರ ಸೇವೆ ಮಾಡುವ ಶಕ್ತಿ ಇನ್ನೂ ಇದೆ. ಎಂದು ಹೇಳಿದ್ದಾರೆ.

Key words: lost –ticket- Mudigere –MLA- MP Kumaraswamy – BJP.