Wednesday, September 30, 2026

BDA Apartments

MYSORE, LOVERS SUICIDE: ಕ್ಷುಲಕ ಕಾರಣ, ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು BDA JK_Adv BDA Adv
Home Crime MYSORE, LOVERS SUICIDE: ಕ್ಷುಲಕ ಕಾರಣ, ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

MYSORE, LOVERS SUICIDE: ಕ್ಷುಲಕ ಕಾರಣ, ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

LOVERS WHO COMMITTED SUICIDE DUE TO TRIVIAL REASONS.

 

ಮೈಸೂರು, ಜು,25,2024: (www.justkannada.in news) ಕ್ಷುಲಕ ಕಾರಣಕ್ಕೆ ಪ್ರೇಮಿಗಳ ನಡುವೆ ಗಲಾಟೆ. ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ. ಪ್ರಿಯತಮನೂ ನೇಣಿಗೆ ಶರಣು.

ಮೈಸೂರಿನ ದಟ್ಟಗಳ್ಳಿ ಹಾಗೂ ಜ್ಯೋತಿ ನಗರದಲ್ಲಿ ಘಟನೆ. ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು.

ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು. ಇತ್ತೀಚೆಗೆ ಪ್ರೇಮಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ. ಇಬ್ಬರ ನಡುವೆ ಸಣ್ಣ ಗಲಾಟೆ.

ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನ ಆಸ್ಪತ್ರೆಗೆ ಕರೆತಂದಿದ್ದಾನೆ. ಆದ್ರೆ ಮೋನಿಕಾ ಮೃತಪಟ್ಟಿದ್ದಳು.

ಮೋನಿಕಾ ಸಾವಿಗೆ ಮನನೊಂದ ಮನು ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣು. ಸದ್ಯ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

key words: LOVERS, WHO, COMMITTED SUICIDE, DUE TO, TRIVIAL REASONS.