ಉತ್ಪಾದನೆ ಕಡಿಮೆ ಇರುವುದರಿಂದ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು, ಅಕ್ಟೋಬರ್,12,2023(www.justkannada.in): ರಾಜ್ಯದಲ್ಲಿ ವಿದ್ಯುತ್​ ಕೊರತೆ ಹಾಗೂ ಲೋಡ್​ ಶೆಡ್ಡಿಂಗ್​ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಬರಗಾಲ ಹಿನ್ನಲೆ ವಿದ್ಯುತ್ ಉತ್ಪಾದನೆ ಕಡಿಮೆ ಇದೆ.  ಹೀಗಾಗಿ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್,  ರಾಜ್ಯದಲ್ಲಿ ಬರಗಾಲ ಇರುವುದರಿಂದ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಉತ್ಪಾದನೆ ಕಡಿಮೆ ಇರುವುದರಿಂದ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ .10,000 ಎಕರೆಯಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಇದೆ. ಈಗಾಗಲೇ ಇಂಧನ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸೆಂಟ್ರಲ್ ಗ್ರಿಡ್​ನಿಂದ ವಿದ್ಯುತ್​ ಕೊಟ್ಟರೇ ನಮಗೆ ಅನುಕೂಲ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ಲೋಡ್ ಶೆಡ್ಡಿಂಗ್ ಬಗ್ಗೆ ಬಿಜೆಪಿ ನಾಯಕರ ಟೀಕೆ  ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮಳೆ ಸರಿಯಾಗಿ ಆಗಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ. ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಅವರ ಕಾಲದಲ್ಲಿ ಎಷ್ಟು ಸಮಸ್ಯೆ ಆಗಿತ್ತು ಎನ್ನುವುದನ್ನು ತಿಳಿಸಲಿ  ಎಂದು ಟಾಂಗ್ ನೀಡಿದರು.

Key words: low production- power- problem – DCM -DK Shivakumar.