ಮಂಡ್ಯ ,ಮಾರ್ಚ್,27,2026 (www.justkannada.in): ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗ್ಯಾಸ್ ಏಜೆನ್ಸಿಗಳ ಮಾಲೀಕರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಎಚ್ಚರಿಕೆ ನೀಡಿದರು.
ಗ್ಯಾಸ್ ಸಿಲಿಂಡರ್ ಅಭಾವ ಕುರಿತು ಮಾತನಾಡಿದ ಮಂಡ್ಯ ಡಿಸಿ ಡಾ.ಕುಮಾರ್, ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಗ್ಯಾಸ್ ಬುಕಿಂಗ್ ಆನ್ ಲೈನ್ ಸಮಸ್ಯೆ ಸರಿಪಡಿಸಲು ಸೂಚನೆ ನೀಡಿದ್ದೇನೆ. ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಹಾಗೆಯೇ ಪೆಟ್ರೋಲ್ ಬಂಕ್ ಮಾಲೀಕರ ಜೊತೆಗೆ ಈಗಾಗಲೇ ಸಭೆ ನಡೆಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಗತ್ಯ ಇರುವಷ್ಟು ಪೆಟ್ರೋಲ್ ಡೀಸೆಲ್ ಸಂಗ್ರಹವಿದೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಕ್ಯಾನ್ ಗಳಿಗೆ ಪೆಟ್ರೋಲ್ ತುಂಬಿಸಿದರೆ ಬಂಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕ್ಯಾನ್, ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಸುವುದು ಸುರಕ್ಷಿತ ಕ್ರಮವಲ್ಲ. ಎಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ಡಿಸಿ ಡಾ. ಕುಮಾರ್ ವಾರ್ನಿಂಗ್ ಕೊಟ್ಟರು.
Key words: Strict action, selling, domestic cylinders , Mandya, DC







