ಕೋವಿಡ್ ನಿಂದ ಸಂಕಷ್ಟದಲ್ಲಿರುವ ಜನರಿಗೆ ಎಲ್‌ ಪಿಜಿ ಸಿಲಿಂಡರ್‌ ದರ ಏರಿಕೆಯ ಶಾಕ್‌.

ನವದೆಹಲಿ,ಜುಲೈ,1,2021(www.justkannada.in):  ಕೊರೋನಾ 2ನೇ ಅಲೆ  ಲಾಕ್‌ಡೌನ್‌ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ದೇಶದ ಜನರಿಗೆ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆಯ ಶಾಕ್‌ ನೀಡಿದೆ.jk

ಜುಲೈ 1ರಿಂದಲೇ ಅನ್ವಯ ಆಗುವಂತೆ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 25.50 ರೂಪಾಯಿ ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂ. ಏರಿಕೆ ಮಾಡಲಾಗಿದೆ. 19 ಕೆಜಿ ಸಿಲಿಂಡರ್‌ನ ಬೆಲೆಯನ್ನು ಸಹ 76 ರೂ. ಹೆಚ್ಚಿಸಲಾಗಿದೆ
ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಇದೀಗ ಜುಲೈ ತಿಂಗಳಿನಲ್ಲಿ  ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಮೂಲಕ ಜನರಿಗೆ ಶಾಕ್ ನೀಡಿದೆ.

ನವದೆಹಲಿಯಲ್ಲಿ ಎಲ್ ಪಿಜಿ ಸಿಲಿಂಡರ್ ದರ 809 ರೂ.ನಿಂದ 834.50 ರೂಪಾಯಿಗೆ ಏರಿಕೆಯಾದರೆ ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರಿಂದ 836.50 ರೂಗೆ ಹೆಚ್ಚಳವಾಗಿದೆ. ಕೋಲ್ಕತಾದಲ್ಲಿ 835.50 ರೂ.ನಿಂದ 861 ರೂಪಾಯಿಗೆ,  ಮುಂಬೈನಲ್ಲಿ 809 ರೂ.ನಿಂದ 834.50 ರೂಪಾಯಿಗೆ ಹೆಚ್ಚಳವಾಗಿದೆ.

Key words: LPG –cylinder-rate-hike -people.