ಕಾಂಗ್ರೆಸ್ ನವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೆ ಏನೂ ಬರುವುದಿಲ್ಲ ; ಸಚಿವ ಎಸ್.ಟಿ.ಸೋಮಶೇಖರ್ ಟೀಕೆ

ದಾವಣಗೆರೆ,ನವೆಂಬರ್,16,2020(www.justkannada.in) ; ಕಾಂಗ್ರೆಸ್ ನವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೆ ಏನೂ ಬರುವುದಿಲ್ಲ. ಇನ್ನು 2-3 ವಾರದೊಳಗೆ ಗ್ರಾಪಂ ಚುನಾವಣೆ ಘೋಷಣೆಯಾಗಬಹುದು. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.kannada-journalist-media-fourth-estate-under-loss

ಕೋವಿಡ್ 19 ರ ಹಿನ್ನೆಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಜನವರಿ ವೇಳೆಗೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದಕ್ಕೆ ಹಾಕಲು ಸರ್ಕಾರ ತೀರ್ಮಾನಿಸಿತ್ತೇ ವಿನಹ ಇದರಲ್ಲಿ ಯಾವುದೇ ರಾಜಕಾರಣವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನವರು ಕೋರ್ಟ್ ಹೋಗಿದ್ದರು

ಕಾಂಗ್ರೆಸ್ ನವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೆ ಏನೂ ಬರುವುದಿಲ್ಲ. ಗ್ರಾಪಂ ಚುನಾವಣೆಗಳು ನಡೆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಕಷ್ಟವಾಗುತ್ತದೆ. ಮಾಸ್ಕ್ ಧರಿಸದೇ ಸಮಸ್ಯೆಗಳಾದರೆ ಎಂಬ ಆತಂಕ ಸರ್ಕಾರವನ್ನು ಕಾಡುತ್ತಿತ್ತು. ಆದರೆ, ಕಾಂಗ್ರೆಸ್ ನವರು ಕೋರ್ಟ್ ಹೋಗಿದ್ದರು. ಇನ್ನು 2-3 ವಾರದೊಳಗೆ ಚುನಾವಣೆ ಘೋಷಣೆಯಾಗಬಹುದು. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.

Lying-Congressman-Nothing-else-comes-Minister- S.T.Somashekhar-criticized

key words ; Lying-Congressman-Nothing-else-comes-Minister- S.T.Somashekhar-criticized