ಬೆಂಗಳೂರು,ಮೇ,22,2025 (www.justkannada.in): ಕಾಮಿಡಿ ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಮಡೆನೂರು ಮನು ವಿರುದ್ದ ಕಿರುತರೆ ನಟಿಯೊಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದೆ.
ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದು, ಆರೋಪಿ ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.
ಕುಲದಲ್ಲಿ ಕೀಳ್ಯಾವೋದು ಸಿನಿಮಾದಲ್ಲಿ ನಟನಾಗಿ ಮಡೆನೂರು ಮನು ಅಭಿನಯಿಸಿದ್ದು ನಾಳೆ ಸಿನಿಮಾ ರಿಲೀಸ್ ಆಗಬೇಕಿದೆ. ಇದರ ನಡುವೆ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ.
Key words: Rape case, filed, against, Madenoor Manu