ಮಧ್ಯಪ್ರದೇಶದ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ..

0
2

ಭೂಪಾಲ್,ಡಿಸೆಂಬರ್,11,2023(www.justkannada.in): ಮಧ್ಯ ಪ್ರದೇಶದ ನೂತನ ಸಿಎಂ ಹೆಸರು ಘೋಷಣೆಯಾಗಿದ್ದು ಈ ಬಾರಿ ಬಿಜೆಪಿ ಹೊಸಬರಿಗೆ ಮಣೆ ಹಾಕಿದೆ.

ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಮೋಹನ್ ಯಾದವ್ 3ನೇ ಬಾರಿಗೆ ಶಾಸಕರಾಗಿದ್ದಾರೆ.  ಪ್ರಸ್ತುತ ಉಜ್ಜೈನಿ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದು, ಈ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿದ್ದರು.

ಇನ್ನು ಸಿಎಂ ಹುದ್ದೆಗೆ ಆಕಾಂಕ್ಷಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನಿರಾಸೆಯಾಗಿದೆ.

Key words: Madhya Pradesh- new CM –Mohan Yadav-BJP