ಮಹದಾಯಿ ಯೋಜನೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದ ಗೋವಾಗೆ ಶಾಕ್: ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಮತ್ತೆ ಜಯ…

ನವದೆಹಲಿ,ಮಾ,2,2020(www.justkannada.in):  ಮಹದಾಯಿ ಯೋಜನೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದ ಗೋವಾ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಲ್ಲಿ ಮತ್ತೆ ಹಿನ್ನಡೆಯಾಗಿದೆ.

ಮಹದಾಯಿ ಯೋಜನೆ ಕಾಮಗಾರಿಗೆ ತಡೆ ನೀಡುವಂತೆ ಗೋವಾ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಹದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಮತ್ತೆ ಜಯ ಸಿಕ್ಕಂತಾಗಿದೆ. ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಐ ತೀರ್ಪೇ ಅಂತಿಮ. ಅದರ ಹೊರತಾಗಿ ಬೇರಾವುದೇ ತೀರ್ಪಿಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, 2014ರ ನ್ಯಾಯಾಧೀಕರಣದ ಮಧ್ಯಾಂತರ ತೀರ್ಪು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಮಾಲೀನ್ಯ ನಿಯಂತ್ರಣ ಮಂಡಳಿ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಸೂಚಿಸಿದೆ. ಈ ಮೂಲಕ ಉತ್ತರ ಕರ್ನಾಟಕಕ್ಕೆ ನೀರೊದಗಿಸುವ ಮಹತ್ವಾಕಾಂಕ್ಷೆಯ ಯೋಜನೆ ಚುರುಕು ಪಡೆಯಲಿದೆ.

ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಿರ್ದೇಶನದಂತೆ ಇತ್ತೀಚೆಗೆ ಮಹದಾಯಿ ನದಿ ನೀರು ಹಂಚಿಕೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಇದಾದ ನಂತರ ಗೋವಾ ಸರ್ಕಾರ ಇದಕ್ಕೆ ತಕರಾರು ತೆಗೆದು ಕಾಮಗಾರಿಗೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿಸಲ್ಲಿಸಿತ್ತು.

Key words: mahadayi river plan-Supreme Court- dismiss- gao – petition