140 ಕೋಟಿ ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಿಜ್ಞಾನ ಕಾಲೇಜು ದುರಸ್ತಿ ಕಾಮಗಾರಿ ನಿರ್ಧಾರ –ಸಚಿವ ಡಾ ಎಂ.ಸಿ. ಸುಧಾಕರ್

ಮೈಸೂರು,ಅಕ್ಟೋಬರ್,18,2023(www.justkannada.in): ಇಂದು ಮೈಸೂರಿನ ಮಹಾರಾಣಿ ಕಲಾ ಮತ್ತು ವಿಜ್ಞಾನ ಮಹಿಳಾ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ ಎಂ.ಸಿ. ಸುಧಾಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯರ ಕುಂದು ಕೊರತೆ ವಿಚಾರಿಸಿದರು.

ನಂತರ  ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್ ಅವರು ಇತಿಹಾಸ ಇರುವಂತಹ ಮಹಾರಾಣಿ ಕಾಲೇಜುಗಳಲ್ಲಿ ಕಟ್ಟಡದ  ಹಾಗೂ ವಸತಿ ನಿಯಮ ಕೊರತೆ ಕಂಡುಬಂದಿದೆ. ಈಗಾಗಲೇ ಮಹಾರಾಣಿ ಕಲಾ ಕಾಲೇಜಿಗೆ 17 ಕೋಟಿ ಬಿಡುಗಡೆಯಾಗಿದೆ ಎಂದು ಅವರು ತಿಳಿಸಿದರು.

ವಿಜ್ಞಾನ ಕಾಲೇಜಿನಲ್ಲಿ ಐತಿಹಾಸಿಕ ಕಟ್ಟಡವಾಗಿದ್ದು ಸಾಕಷ್ಟು ಸಮಸ್ಯೆ ಇದೆ. ಹಾಗಾಗಿ ಜಿಲ್ಲಾಧಿಕಾರಿ ಹಾಗೂ ಪುರಾತತ್ವ ಇಲಾಖೆ ಜೊತೆ ಮಾತುಕತೆ ನಡೆಸಲಾಗಿದೆ ಐದು ಅಂತಸ್ತಿನ ಮಹಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.  ಪಾರಂಪರಿಕ ಕಟ್ಟಡ ಶೈಲಿಯಲ್ಲಿ ಕಟ್ಟಲಾಗುವುದು ಎಂದರು.

ಮಹಾರಾಣಿ ಕಲಾ ಮತ್ತು ವಿಜ್ಞಾನ ಮಹಿಳಾ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಒಟ್ಟು 140 ಕೋಟಿ ವೆಚ್ಚದಲ್ಲಿ ದುರಸ್ತಿ ಕಾಮಗಾರಿ ನಿರ್ಮಾಣಕ್ಕೆ ಈಗಾಗಲೇ ನಿರ್ಧರಿಸಲಾಗಿದ್ದು ಸದ್ಯದಲ್ಲೇ ಜನವರಿ ನಂತರ ಕೆಲಸ ಪ್ರಾರಂಭ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮರೀತಿಬ್ಬೆಗೌಡ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Maharani Art and Science  -mysore -Minister- Dr. M.C. Sudhakar