Sunday, September 20, 2026

BDA Apartments

ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ BDA JK_Adv BDA Adv
Home Front Page ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ

ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ

ಮೈಸೂರು,ಜನವರಿ,28,2025 (www.justkannada.in): ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕಾಮಗಾರಿ ವೇಳೆ ಕಟ್ಟಡ ಕುಸಿದಿರುವ ಘಟನೆ ಇಂದು ನಡೆದಿದೆ.ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ nypunya1

ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಘಟನೆ ನಡೆದಿದ್ದು ಅವಶೇಷಗಳಡಿ ಓರ್ವ ಕಾರ್ಮಿಕ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಾರಾಣಿ ಕಾಲೇಜು ಕಟ್ಟಡ ಶಿಥಿಲಗೊಂಡಿತ್ತು. ಈ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು.

ಈ ವೇಳೆ ಕಿಟಕಿ ತೆಗೆಯುವಾಗ ಕಟ್ಟಡ ಕುಸಿದಿದ್ದು ಸದ್ದಾಂ ಎಂಬ ಕಾರ್ಮಿಕ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಮಿಕನ ರಕ್ಷಣೆಗೆ ಮುಂದಾಗಿದ್ದಾರೆ.

Key words: Building, collapses, Maharani College, Mysore