Monday, September 28, 2026

BDA Apartments

ಹಸುವನ್ನು ‘ರಾಜ್ಯಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ BDA JK_Adv BDA Adv
Home Front Page ಹಸುವನ್ನು ‘ರಾಜ್ಯಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಹಸುವನ್ನು ‘ರಾಜ್ಯಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ,ಸೆಪ್ಟಂಬರ್,30,2024 (www.justkannada.in):   ಮಹಾರಾಷ್ಟ್ರ ಸರ್ಕಾರ ಹಸುವನ್ನು ‘ರಾಜ್ಯ ಮಾತೆ’ ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಈ ಘೋಷಣೆ ಮಾಡಿದ್ದು,  ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ. ಭಾ ರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಭಾರತದಲ್ಲಿ ಗೋವಿಗೆ ತಾಯಿಯ ಸ್ಥಾನಮಾನವನ್ನು ನೀಡಲಾಗಿದ್ದು, ಹಿಂದೂ ಧರ್ಮದಲ್ಲಿ ಗೋವನ್ನು ಪೂಜಿಸಲಾಗುತ್ತದೆ. ಇದಲ್ಲದೆ, ಹಸುವಿನ ಹಾಲು, ಮೂತ್ರ ಮತ್ತು ಸಗಣಿಗಳನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದೀಗ ಗೋವುಗಳನ್ನು ಮಹಾರಾಷ್ಟ್ರ ಸರ್ಕಾರ ರಾಜ್ಯಮಾತೆ ಎಂದು ಘೋಷಣೆ ಮಾಡಿದೆ.

ಹಸುವನ್ನು ‘ರಾಜ್ಯಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ VTU TOP BANNER 04

Key words: Maharashtra government, cow, mother of the state